Thursday, November 5, 2026
Google search engine
HomeUncategorizedಕನ್ನಡ ರಾಜ್ಯೋತ್ಸವ ❤️💛

ಕನ್ನಡ ರಾಜ್ಯೋತ್ಸವ ❤️💛

ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ವರದಿ
ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ದೊಡ್ಡಬಳ್ಳಾಪುರ
ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ದೊಡ್ಡಬಳ್ಳಾಪುರದ ಕನ್ನಡ ವಿಭಾಗ ಹಾಗೂ ಆಂತರಿಕ ಗುಣಮಟ್ಟ ಭರವಸೆ ಕೋಶ (IQAC) ವತಿಯಿಂದ ದಿನಾಂಕ 05-11-2026 ರಂದು ಬೆಳಿಗ್ಗೆ 10.00 ಗಂಟೆಗೆ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಸಂಭ್ರಮದಿಂದ ಆಯೋಜಿಸಲಾಯಿತು.
ಕಾರ್ಯಕ್ರಮವು ಕನ್ನಡಾಂಬೆ ಹಾಗೂ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಪ್ರಾರಂಭವಾಯಿತು. ಕನ್ನಡ ನಾಡು, ನುಡಿ, ಸಾಹಿತ್ಯ, ಸಂಸ್ಕೃತಿ ಮತ್ತು ಪರಂಪರೆಯ ಮಹತ್ವವನ್ನು ಸಾರುವ ಉದ್ದೇಶದಿಂದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಬೆಂಗಳೂರಿನ ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಪ್ರಾಧ್ಯಾಪಕರಾದ ಡಾ. ಎಲ್.ಜಿ. ಮೀರಾ ಅವರು ಭಾಗವಹಿಸಿದ್ದರು. ತಮ್ಮ ಮುಖ್ಯ ಭಾಷಣದಲ್ಲಿ ಕನ್ನಡ ಭಾಷೆಯ ಐತಿಹಾಸಿಕ ಹಿನ್ನೆಲೆ, ಕನ್ನಡ ಸಾಹಿತ್ಯದ ಶ್ರೀಮಂತಿಕೆ, ಕನ್ನಡ ಭಾಷೆಯ ಬೆಳವಣಿಗೆಯಲ್ಲಿ ಸಾಹಿತಿಗಳು ಹಾಗೂ ಕನ್ನಡಪರ ಚಳವಳಿಗಳ ಕೊಡುಗೆ ಮತ್ತು ಪ್ರಸ್ತುತ ಜಾಗತೀಕರಣದ ಸಂದರ್ಭದಲ್ಲಿ ಕನ್ನಡ ಭಾಷೆಯ ಉಳಿವು ಮತ್ತು ಬೆಳವಣಿಗೆಯ ಅಗತ್ಯತೆಯನ್ನು ಕುರಿತು ಮಾತನಾಡಿದರು. ವಿದ್ಯಾರ್ಥಿಗಳು ಕನ್ನಡ ಭಾಷೆಯನ್ನು ದೈನಂದಿನ ಜೀವನದಲ್ಲಿ ಬಳಸುವುದರ ಜೊತೆಗೆ ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿಯ ಬಗ್ಗೆ ಅಭಿಮಾನ ಬೆಳೆಸಿಕೊಳ್ಳಬೇಕೆಂದು ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಡೋರಿನ್ ಸ್ನೇಹಲತಾ ಕೋಟ್ಯಾನ್ ಅವರು ವಹಿಸಿದ್ದರು. ತಮ್ಮ ಅಧ್ಯಕ್ಷೀಯ ನುಡಿಗಳಲ್ಲಿ ಕನ್ನಡ ಭಾಷೆಯು ನಮ್ಮ ನಾಡಿನ ಅಸ್ಮಿತೆ ಮತ್ತು ಸಂಸ್ಕೃತಿಯ ಪ್ರತೀಕವಾಗಿದೆ. ವಿದ್ಯಾರ್ಥಿಗಳು ಕನ್ನಡ ಭಾಷೆಯ ಬಗ್ಗೆ ಗೌರವ ಮತ್ತು ಅಭಿಮಾನ ಬೆಳೆಸಿಕೊಳ್ಳುವುದರ ಜೊತೆಗೆ ಇತರ ಭಾಷೆಗಳನ್ನೂ ಗೌರವಿಸಬೇಕು ಎಂದು ತಿಳಿಸಿದರು. ಕನ್ನಡ ಭಾಷೆಯ ಸಂರಕ್ಷಣೆ ಮತ್ತು ಅಭಿವೃದ್ಧಿಯಲ್ಲಿ ಯುವಜನರ ಪಾತ್ರ ಮಹತ್ವದ್ದಾಗಿದೆ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಕನ್ನಡ ವಿಭಾಗದ ಮುಖ್ಯಸ್ಥರಾದ ಪ್ರೊ. ಎಸ್.ಎಂ. ರವಿಕುಮಾರ್, IQAC ಸಂಚಾಲಕರಾದ ಡಾ. ಗಂಗಾಧರಯ್ಯ ಬಿ.ಆರ್., ಸಾಂಸ್ಕೃತಿಕ ಸಮಿತಿಯ ಸಂಚಾಲಕರಾದ ಶ್ರೀ ಸವಿತಕುಮಾರ್ ಎಸ್.ಬಿ., ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಸತೀಶ್ ಕುಮಾರ್. N B , wom, ದೊಡ್ಡಬಳ್ಳಾಪುರ.

LEAVE A REPLY

Please enter your comment!
Please enter your name here

RELATED ARTICLES
- Advertisment -
Google search engine

Most Popular

Recent Comments