*ಆಹಾರ ಪದಾರ್ಥಗಳು ಹಾಗೂ ಸಿಹಿ – ತಿಂಡಿ ತಿನಿಸುಗಳಲ್ಲಿ “ಲಿಕ್ವಿಡ್ ನೈಟ್ರೋಜನ್” ನಿಷೇಧ* ಬೆಂಗಳೂರು: ಸಾರ್ವಜನಿಕರ ಆರೋಗ್ಯ ಹಿತದೃಷ್ಟಿಯಿಂದ ಸಿಹಿ- ತಿಂಡಿ ತಿನಿಸುಗಳು ಮತ್ತು ಆಹಾರ ಪದಾರ್ಥಗಳಲ್ಲಿ ಲಿಕ್ವಿಡ್ ನೈಟ್ರೋಜನ್ ಬಳಕೆಯನ್ನು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಸಂಪೂರ್ಣವಾಗಿ ನಿಷೇಧಿಸಿದೆ. ಈ ಬಗ್ಗೆ ಇಲಾಖೆ ಆಯುಕ್ತರು ಪ್ರಕಟಣೆ ಹೊರಡಿಸಿದ್ದಾರೆ. ರಾಜ್ಯದ ಕೆಲವು ಪ್ರದೇಶಗಳಲ್ಲಿ ಆಹಾರ ಪದಾರ್ಥ ಸೇವನೆ ಸಂದರ್ಭ ವೇಳೆಯಲ್ಲಿ ಲಿಕ್ವಿಡ್ ನೈಟ್ರೋಜನ್ ಬಳಕೆ ಯಥೇಚ್ಛವಾಗಿ ಮಾಡಲಾಗುತ್ತದೆ. ಆದರೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ…