*ಆಗಸ್ಟ್ 5 ರಿಂದ ನೀಟ್ ರೋಲ್ ನಂಬರ್ ದಾಖಲಿಸಲು ಅವಕಾಶ ಕಲ್ಪಿಸಿದ ಕೆಇಎ*
ಬೆಂಗಳೂರು: ಈ ಹಿಂದೆ ಯುಜಿ – ಸಿಇಟಿ ಗೆ ಅರ್ಜಿ ಸಲ್ಲಿಸಿರುವ, ನೀಟ್ ಪರೀಕ್ಷೆಯಲ್ಲಿ ಅರ್ಹತೆ ಪಡೆದಿರುವ ಅಭ್ಯರ್ಥಿಗಳು ತಮ್ಮ ನೀಟ್ ರೋಲ್ ನಂಬರ್ ದಾಖಲಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ ) ಇಂದು ಸೋಮವಾರ ಲಿಂಕ್ ಬಿಡುಗಡೆ ಮಾಡಲಿದೆ.
ಆಗಸ್ಟ್ 5 ರಂದು ಬೆಳಗ್ಗೆ 11 ಗಂಟೆಗೆ ಕೆಇಎ ವೆಬ್ ಸೈಟ್ ನಲ್ಲಿ ಯು. ಜಿ ನೀಟ್ -2024 ಲಿಂಕ್ ಬಿಡುಗಡೆ ಮಾಡಲಾಗುವುದು. ಆಗಸ್ಟ್ 7ರಂದು ಬೆಳಗ್ಗೆ 11 ರವರೆಗೆ ರೂಲ್ ನಂಬರ್ ದಾಖಲಿಸಬಹುದು ಎಂದು ಕೆಇಎ ಕಾರ್ಯ ನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಮಾಹಿತಿಯನ್ನು ತಿಳಿಸಿದ್ದಾರೆ.
ಅಭ್ಯರ್ಥಿಗಳು ದಾಖಲಿಸುವ ರೋಲ್ ನಂಬರ್ ಅನ್ನು ಎನ್ ಟಿ ಎ ಡೇಟಾ ದೊಂದಿಗೆ ತಾಳೆ ಮಾಡಿ ಯುಜಿ ನೀಟ್ ಅರ್ಹತೆ ಪಡೆದಿದ್ದಲ್ಲಿ ಅರ್ಜಿನಮೂನೆ ಪ್ರತಿ ತೆಗೆದುಕೊಳ್ಳಲು ಅವಕಾಶ ನೀಡಲಾಗುತ್ತದೆ. ತದನಂತರ ವೆರಿಫಿಕೇಷನ್ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳ ಬಹುದು ಎಂದು ತಿಳಿಸಿದ್ದಾರೆ .
ಹೊಸದಾಗಿ ಅರ್ಜಿ ಸಲ್ಲಿಸಲು ಆಗಸ್ಟ್ 7 ರಿಂದ ಅವಕಾಶ ಕಲ್ಪಿಸಲಾಗಿದೆ. ನೀಟ್ ಪರೀಕ್ಷೆಯಲ್ಲಿ ಅರ್ಹತೆ ಹೊಂದಿದ್ದು, ಇನ್ನು ಅರ್ಜಿ ಸಲ್ಲಿಸಿದವರು ಆಗಸ್ಟ್ 7 ರಿಂದ 9ರವರೆಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ವಿವರಗಳಿಗೆ ಕೆಇಎ ವೆಬ್ಸೈಟ್ ವೀಕ್ಷಿಸಬಹುದು ಎಂದು ಅವರು ಹೇಳಿದ್ದಾರೆ.
ಸಿದ್ದಾರ್ಥ
ವರ್ಲ್ಡ್ ಆಫ್ ಮೋಹನ್



