*ಹೋಟೆಲ್ ಫುಡ್ ಪರಿಶೀಲನೆ ಮಾಡಲು ಸರ್ಕಾರದಿಂದಲೇ ಕಿಟ್ ಪೂರೈಕೆ*
ಬೆಂಗಳೂರು: ರಾಜ್ಯದ ಹಲವು ಹೋಟೆಲ್ ರೆಸ್ಟೋರೆಂಟ್ ಗಳಲ್ಲಿ, ಸ್ವಚ್ಛತೆ ಇಲ್ಲದೆ ಹಾಗೂ ಕಲಪೆ ಗುಣಮಟ್ಟದ ಆಹಾರ ಪೂರೈಸುತ್ತಿರುವ ದೂರುಗಳು ದಿನೇ ದಿನೇ ಹೆಚ್ಚಾಗುತ್ತಲೇ ಇವೆ. ಈ ಹಿನ್ನಲೆಯಲ್ಲಿ ಸಾರ್ವಜನಿಕರು ಆಹಾರ ಸುರಕ್ಷತೆ ಪರಿಶೀಲನೆ ಮಾಡಿಸಿಕೊಳ್ಳಲು ಸುಲಭವಾಗುವಂತೆ ಆರೋಗ್ಯ ಇಲಾಖೆಯಿಂದ ಆಹಾರ ಪರಿಶೀಲನೆ ಕಿಟ್ ವ್ಯವಸ್ಥೆ ಮಾಡಲು ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಬಗ್ಗೆ ಸೋಮವಾರ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೋಟೆಲ್ ಹಾಗೂ ರೆಸ್ಟೋರೆಂಟ್ ಮಾಲೀಕರೊಂದಿಗೆ ಸಭೆ ನಡೆಸಿದ್ದಾರೆ. ಅತಿ ಹೆಚ್ಚು ಹೋಟೆಲ್ ಮತ್ತು ರೆಸ್ಟೋರೆಂಟ್ ಇರುವ ಸ್ಥಳಗಳಲ್ಲಿ ಇಲಾಖೆಯಿಂದಲೇ ಆಹಾರ ಪರಿಶೀಲನೆ ಕಿಟ್ ವ್ಯವಸ್ಥೆ ಮಾಡಲಾಗುವುದು. ಇದರಿಂದ ಹೋಟೆಲ್ ನವರು ಸಹ ತಮ್ಮ ಆಹಾರದ ಗುಣಮಟ್ಟ ಪರಿಶೀಲನೆಗೆ ಸಹಾಯವಾಗಲಿದೆ ಎಂದಿದ್ದು, ಹೋಟೆಲ್ ಮಾಲೀಕರು ಸಮ್ಮತಿಯನ್ನು ನೀಡಿದ್ದಾರೆ ಎಂದು ಹೇಳಲಾಗಿದೆ.
ಸಿದ್ದಾರ್ಥ
ವರ್ಲ್ಡ್ ಆಫ್ ಮೋಹನ್



