Thursday, May 14, 2026
Google search engine
HomeKarnatakaBack to school..

Back to school..

*ಕರ್ನಾಟಕದಾದ್ಯಂತ ಇಂದಿನಿಂದ ಶಾಲೆಗಳು ಪುನರಾರಂಭ*

ಬೆಂಗಳೂರು: 2024- 25 ನೇ ಸಾಲಿನ ಶೈಕ್ಷಣಿಕ ಅವಧಿ ಆರಂಭಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕಳೆದ ಒಂದುವರೆ ತಿಂಗಳಿನಿಂದ ಬೇಸಿಗೆ ರಜೆಯಿಂದ ಶಾಲೆಗಳು ಬಂದ್ ಆಗಿದ್ದು ರಾಜ್ಯದ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಇಂದು ಮೇ 29 ರಂದು ಬುಧವಾರದಿಂದ ಮತ್ತೆ ಬಾಗಿಲು ತೆರೆಯಲಿವೆ. ಆದರೆ ಮಕ್ಕಳನ್ನು ಮಾತ್ರ ಮೇ 31 ರಂದು ಶಾಲಾ ಪ್ರಾರಂಭೋತ್ಸವದ ಮೂಲಕ ಸಿಹಿ ನೀಡಿ ಬರ ಮಾಡಿಕೊಳ್ಳಲಿದ್ದಾರೆ.
ವಿಶೇಷ ವೆಂದರೆ ಈ ಬಾರಿ ಮಕ್ಕಳು ಶಾಲೆಗೆ ಬರುತ್ತಿದ್ದಂತೆ ಎರಡು ಜೊತೆ ಸಮವಸ್ತ್ರ ಮತ್ತು ಪಠ್ಯಪುಸ್ತಕಗಳನ್ನು ನೀಡಲು ಶಿಕ್ಷಣ ಇಲಾಖೆ ಸಿದ್ಧತೆ ಮಾಡಿಕೊಂಡಿದೆ.
ಈಗಾಗಲೇ ಸಮವಸ್ತ್ರ ಪೂರ್ಣ ಪ್ರಮಾಣದಲ್ಲಿ ರವಾನೆಯಾಗಿದ್ದು ಪಠ್ಯಪುಸ್ತಕಗಳನ್ನು ಕೂಡ ಶೇಖಡ 75 ರಿಂದ 80 ರಷ್ಟು ಸರಬರಾಜು ಮಾಡಲಾಗಿದೆ. ಕ್ಷೇತ್ರ ಶಿಕ್ಷಣಾಧಿಕಾರಿಗಳು, ಡಿ. ಡಿ ಪಿ. ಐ ಗಳು ಶಾಲೆಗಳಿಗೆ ಅವುಗಳನ್ನು ತಲುಪಿಸಿ ಪ್ರಾರಂಭಿಸುವ ದಿನವೇ ವಿತರಣೆಗೆ ಕ್ರಮ ವಹಿಸಬೇಕೆಂದು ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಸಿದ್ಧಾರ್ಥ
ವರ್ಲ್ಡ್ ಆಫ್ ಮೋಹನ್

LEAVE A REPLY

Please enter your comment!
Please enter your name here

RELATED ARTICLES
- Advertisment -
Google search engine

Most Popular

Recent Comments