Sunday, September 27, 2026
Google search engine
HomeUncategorizedInaugural Function a grand success..

Inaugural Function a grand success..

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿವಿಧ ಚಟುವಟಿಕೆಗಳಿಗೆ ಚಾಲನೆ

ದೊಡ್ಡಬಳ್ಳಾಪುರ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ದೊಡ್ಡಬಳ್ಳಾಪುರದಲ್ಲಿ 2026–27ನೇ ಸಾಲಿನ ಸಾಂಸ್ಕೃತಿಕ, ಕ್ರೀಡೆ, ಎನ್‌ಎಸ್‌ಎಸ್., ಎನ್‌ಸಿಸಿ., ವೃತ್ತಿ ಕೋಶ, ಯುವ ರೆಡ್‌ಕ್ರಾಸ್, ರೇಂಜರ್ ಮತ್ತು ರೋವರ್ಸ್ ಸೇರಿದಂತೆ ವಿವಿಧ ಸಹಪಠ್ಯ ಹಾಗೂ ವಿದ್ಯಾರ್ಥಿ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ಶುಕ್ರವಾರ ನಡೆಯಿತು.

ಕಾರ್ಯಕ್ರಮ ಮುಖ್ಯ ಅತಿಥಿಗಳಾಗಿ ಡಾ. ಬೈರಮಂಗಲ ರಾಮೇಗೌಡ, ಶ್ರೀ ಸುರೇಂದ್ರ ಚರೋಡಿಯಾ ಹಾಗೂ ಶ್ರೀ ಎಂ. ಸುಭಾಷ್ ಖಿವೇನ್ಸರಾ ಅವರು ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಡೋರಿನ್ ಸ್ನೇಹಲತಾ ಕೋಟ್ಯನ್ ಅವರು ವಹಿಸಿದ್ದರು.

ನಾಡಗೀತೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕಾಲೇಜಿನ ಪ್ರಾಂಶುಪಾಲರು, ಗಣ್ಯರು, ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಗಣ್ಯರನ್ನು ಕಾಲೇಜಿನ ವತಿಯಿಂದ ಆತ್ಮೀಯವಾಗಿ ಸ್ವಾಗತಿಸಲಾಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಗಣ್ಯರು, ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಯಲ್ಲಿ ಸಾಂಸ್ಕೃತಿಕ, ಕ್ರೀಡೆ ಹಾಗೂ ವಿವಿಧ ಸಹಪಠ್ಯ ಚಟುವಟಿಕೆಗಳ ಮಹತ್ವವನ್ನು ವಿವರಿಸಿದರು. ವಿದ್ಯಾರ್ಥಿಗಳು ತಮ್ಮಲ್ಲಿರುವ ಪ್ರತಿಭೆಯನ್ನು ಗುರುತಿಸಿಕೊಂಡು, ದೊರೆಯುವ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಉನ್ನತ ಮಟ್ಟದಲ್ಲಿ ಸಾಧನೆ ಮಾಡಬೇಕು ಎಂದು ಕರೆ ನೀಡಿದರು.

ಸಾಧಕ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಹಾಗೂ ನಗದು ಬಹುಮಾನ

ಕಳೆದ ಶೈಕ್ಷಣಿಕ ಸಾಲಿನಲ್ಲಿ ಉತ್ತಮ ಅಂಕಗಳನ್ನು ಗಳಿಸಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಕಾಲೇಜಿನ ವತಿಯಿಂದ ಪ್ರಶಸ್ತಿ ಹಾಗೂ ₹5,000 ಮತ್ತು ₹1,000 ನಗದು ಬಹುಮಾನ ನೀಡಿ ಗೌರವಿಸಲಾಯಿತು. ನಂತರ ಕಾಲೇಜಿನ ಬೋಧಕ ವೃಂದದ ವತಿಯಿಂದ ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸಿ, ಅವರ ಮುಂದಿನ ಶೈಕ್ಷಣಿಕ ಜೀವನಕ್ಕೆ ಶುಭ ಹಾರೈಸಲಾಯಿತು.

ಇದೇ ಸಂದರ್ಭದಲ್ಲಿ ಈ ವರ್ಷ ನಡೆದ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಆಯೋಜಿಸಲಾಗಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಹಾಗೂ ಸನ್ಮಾನ ನೀಡಿ ಪ್ರೋತ್ಸಾಹಿಸಲಾಯಿತು. ವಿಶೇಷವಾಗಿ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿ-ವಿದ್ಯಾರ್ಥಿನಿಯರನ್ನು ಗೌರವಿಸಲಾಯಿತು.

ವಿದ್ಯಾರ್ಥಿಗಳ ಪ್ರತಿಭೆ, ಪರಿಶ್ರಮ ಹಾಗೂ ಸಾಧನೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಮೂಲಕ ಅವರಲ್ಲಿ ಆತ್ಮವಿಶ್ವಾಸ ಹಾಗೂ ಇನ್ನಷ್ಟು ಸಾಧಿಸುವ ಉತ್ಸಾಹವನ್ನು ಬೆಳೆಸುವುದು ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿತ್ತು.

ಕಾರ್ಯಕ್ರಮದಲ್ಲಿ ಎನ್‌ಸಿಸಿ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಿರುವ ವಿದ್ಯಾರ್ಥಿಗಳಿಗೂ ಅಭಿನಂದನೆ ಸಲ್ಲಿಸಲಾಯಿತು. ಕಾಲೇಜಿನ ಅಭಿವೃದ್ಧಿ ಹಾಗೂ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಇಂತಹ ಚಟುವಟಿಕೆಗಳು ಪೂರಕವಾಗಿವೆ ಎಂದು ಕಾರ್ಯಕ್ರಮದಲ್ಲಿ ತಿಳಿಸಲಾಯಿತು.

ವರದಿ: ನಂದನ್ ಕುಮಾರ್ ಕೆ.ಎಲ್.
ಪತ್ರಿಕೋದ್ಯಮ ವಿಭಾಗ
ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ದೊಡ್ಡಬಳ್ಳಾಪುರ

LEAVE A REPLY

Please enter your comment!
Please enter your name here

RELATED ARTICLES

Astrology

Daily horoscope

- Advertisment -
Google search engine

Most Popular

Astrology

Daughter’s Day.. ❤️

Daily horoscope

Recent Comments