Friday, September 25, 2026
Google search engine
HomeUncategorizedInaugural Function at GFGC Doddaballapura

Inaugural Function at GFGC Doddaballapura

ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ವಿವಿಧ ಚಟುವಟಿಕೆಗಳು ಪೂರಕ: ಡಾ. ಮಧುಸೂಧನ್

ದೊಡ್ಡಬಳ್ಳಾಪುರ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ದೊಡ್ಡಬಳ್ಳಾಪುರದಲ್ಲಿ 2026–27ನೇ ಸಾಲಿನ ಸಾಂಸ್ಕೃತಿಕ, ಕ್ರೀಡೆ, ಎನ್‌ಎಸ್‌ಎಸ್., ಎನ್‌ಸಿಸಿ., ವೃತ್ತಿ ಕೋಶ, ಯುವ ರೆಡ್‌ಕ್ರಾಸ್, ರೇಂಜರ್ ಮತ್ತು ರೋವರ್ಸ್ ಸೇರಿದಂತೆ ವಿವಿಧ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ಶುಕ್ರವಾರ ನಡೆಯಿತು.

ಕಾಲೇಜಿನ ಪ್ರಾಂಶುಪಾಲರು, ಗಣ್ಯರು ಹಾಗೂ ಬೋಧಕ-ಬೋಧಕೇತರ ಸಿಬ್ಬಂದಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ನಾಡಗೀತೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ವಾಣಿಜ್ಯ ವಿಭಾಗದ ಡಾ. ಮಧುಸೂಧನ್ ಅವರು ಮಾತನಾಡಿ, ಕಾಲೇಜಿನ ಅಭಿವೃದ್ಧಿ ಹಾಗೂ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ವಿವಿಧ ಸಹಪಠ್ಯ ಚಟುವಟಿಕೆಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದು ತಿಳಿಸಿದರು. ಕಾರ್ಯಕ್ರಮಕ್ಕೆ ಆಗಮಿಸಿದ ಗಣ್ಯರು, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳನ್ನು ಆತ್ಮೀಯವಾಗಿ ಸ್ವಾಗತಿಸಿದರು.

ದೊಡ್ಡಬಳ್ಳಾಪುರ ಕ್ಷೇತ್ರದ ಶಾಸಕರು ಅನಿವಾರ್ಯ ಕಾರಣದಿಂದಾಗಿ ಕಾರ್ಯಕ್ರಮದ ಆರಂಭದಲ್ಲಿ ಭಾಗವಹಿಸಲು ಸಾಧ್ಯವಾಗದಿದ್ದು, ಕಾರ್ಯಕ್ರಮದ ಮಧ್ಯದಲ್ಲಿ ಆಗಮಿಸುವ ನಿರೀಕ್ಷೆಯಿದೆ ಎಂದು ತಿಳಿಸಲಾಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಶಿಸ್ತು ಮತ್ತು ಮೌನವನ್ನು ಕಾಪಾಡಿಕೊಂಡು ಭಾಗವಹಿಸಿದರು.

ನಂತರ ಗಣ್ಯರು ದೀಪ ಬೆಳಗಿಸುವ ಮೂಲಕ ವಿವಿಧ ಚಟುವಟಿಕೆಗಳಿಗೆ ಅಧಿಕೃತ ಚಾಲನೆ ನೀಡಿದರು. ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ಗಣ್ಯರು, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳಿಗೆ ಕಾಲೇಜಿನ ವತಿಯಿಂದ ಕೃತಜ್ಞತೆ ಸಲ್ಲಿಸಲಾಯಿತು.  ಮಧುಸೂದನ್. Student Journalist, Dept of Journalism,GFGC. ದೊಡ್ಡಬಳ್ಳಾಪುರ.

LEAVE A REPLY

Please enter your comment!
Please enter your name here

RELATED ARTICLES
- Advertisment -
Google search engine

Most Popular

Jaan Vibes 💞

Dosti..

Jumma Mubarak 💚

Recent Comments