Tuesday, June 9, 2026
Google search engine
HomeKarnatakaKSRTC Bus pass for students

KSRTC Bus pass for students

*ವಿದ್ಯಾರ್ಥಿಗಳಿಗೆ ರಿಯಾಯಿತಿ ದರದಲ್ಲಿ ಬಸ್ ಪಾಸ್ ಅರ್ಜಿ ಆಹ್ವಾನಿಸಿದ KSRTC*

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು  2024-25 ನೇ ಸಾಲಿನಲ್ಲಿ ಶಾಲಾ ಕಾಲೇಜಿನ ವಿದ್ಯಾರ್ಥಿಗಳಿಗೆ ರಿಯಾಯಿತಿ ದರದಲ್ಲಿ ಬಸ್ ಪಾಸ್ ನೀಡಲು ಅರ್ಜಿಗಳನ್ನು ಆಹ್ವಾನಿಸಿದೆ.

ಇದಕ್ಕಾಗಿ ಶುಕ್ರವಾರದಿಂದಲೇ ಸೇವಾ ಸಿಂಧು ಪೋರ್ಟಲ್ ಮೂಲಕ ಅವಕಾಶ ಕಲ್ಪಿಸಲಾಗಿದೆ. ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ. ಗ್ರಾಮ ಒನ್, ಕರ್ನಾಟಕ ಒನ್ ಹಾಗೂ ಬೆಂಗಳೂರು ಒನ್ ನಲ್ಲಿ 30 ರೂಪಾಯಿಗಳುನ್ನು ಅರ್ಜಿ ಶುಲ್ಕ ಪಾವತಿ ಮಾಡಬೇಕಾಗುತ್ತದೆ. ಬಸ್ ಪಾಸ್ ಗೆ ಅರ್ಜಿ ಸಲ್ಲಿಸಲು ಕೆಎಸ್ಆರ್‌ಟಿಸಿ ವೆಬ್ಸೈಟ್ ನಲ್ಲಿ ಡಿಕ್ಲರೇಷನ್  ಫಾರಂ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ . ಕಾಲೇಜಿನ ಪ್ರಾಂಶುಪಾಲರ ಸಹಿ ಮತ್ತು ಇತರೆ ದಾಖಲೆಗಳೊಂದಿಗೆ ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಅರ್ಜಿ ಅನುಮೋದನೆ  ನಂತರ ಸಂಬಂಧ ಪಟ್ಟ ವಿವರಗಳನ್ನು ನೋಂದಾಯಿತ ಮೊಬೈಲ್ ನಂಬರ್ ಗೆ ಎಸ್ಎಂಎಸ್ ಮೂಲಕ ಮಾಹಿತಿ ನೀಡಲಾಗುತ್ತದೆ . ಬಳಿಕ ಬಸ್ ಪಾಸ್ ನಿಗದಿತ ಶುಲ್ಕವನ್ನು ಯುಪಿಐ ಮೂಲಕ ಪಾವತಿಸಲು ಅವಕಾಶವಿದೆ .
ನಮ್ಮ ರಾಜ್ಯ ದಲ್ಲಿ ವ್ಯಾಸಂಗ ಮಾಡುತ್ತಿರುವ ನೆರೆಹೊರೆ ರಾಜ್ಯದ ವಿದ್ಯಾರ್ಥಿನಿಯರಿಗೆ ರಿಯಾಯಿತಿ ದರದಲ್ಲಿ ಬಸ್ ಪಾಸ್ ಬಸ್ ನೀಡುವ ಸೌಲಭ್ಯ ಕಲ್ಪಿಸಲಾಗಿದೆ ಎಂದು ಪ್ರಕಟಣೆ ಯಲ್ಲಿ ತಿಳಿಸಲಾಗಿದೆ.

ಸಿದ್ದಾರ್ಥ
ವರ್ಲ್ಡ್ ಆಫ್ ಮೋಹನ್

LEAVE A REPLY

Please enter your comment!
Please enter your name here

RELATED ARTICLES
- Advertisment -
Google search engine

Most Popular

J Vibes

Today in History

Recent Comments