*ಇಂದು ವಿಧಾನ ಪರಿಷತ್ 6 ಸ್ಥಾನಕ್ಕೆ ಎಲೆಕ್ಷನ್*
ವಿಧಾನ ಪರಿಷತ್ತಿನ 3 ಪದವೀಧರ ಮತ್ತು ಮೂರು ಶಿಕ್ಷಕರ ಕ್ಷೇತ್ರಗಳಿಗೆ ಇಂದು ಸೋಮವಾರ ಮತದಾನ ನಡೆಯಲಿದೆ.
ಈಶಾನ್ಯ ಪದವೀಧರ , ಬೆಂಗಳೂರು ಪದವೀಧರ, ನೈರುತ್ಯ ಪದವೀಧರ, ಆಗ್ನೇಯ ಶಿಕ್ಷಕರ, ನೈರುತ್ಯ ಶಿಕ್ಷಕರ, ದಕ್ಷಿಣ ಶಿಕ್ಷಕರ ಕ್ಷೇತ್ರಗಳಿಗೆ ಇಂದು ಸೋಮವಾರ ಬೆಳಗ್ಗೆ 8 ಗಂಟೆಯಿಂದ ಸಂಜೆ 4:00 ವರೆಗೆ ಮತದಾನ ನಡೆಯಲಿದೆ.
ಈ ಆರು ಕ್ಷೇತ್ರಗಳಲ್ಲಿ ಒಬ್ಬ ಮಹಿಳೆ ಸೇರಿ 78 ಅಭ್ಯರ್ಥಿಗಳು ಅಂತಿಮ ಸ್ಪರ್ಧಾ ಕಣದಲ್ಲಿದ್ದಾರೆ. ಮುಖ್ಯವಾಗಿ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮರುತಿಬ್ಬೆಗೌಡ, , ನೈರುತ್ಯ ಪದವೀಧರ ಕ್ಷೇತ್ರ ದ ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯನೂರ್ ಮಂಜುನಾಥ್, ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಡಾ. ಧನಂಜಯ ಸರ್ಜಿ, ನೈರುತ್ಯ ಪದವಿ ಕ್ಷೇತ್ರದ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಕೆ. ರಘುಪತಿ ಭಟ್, ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ವಿವೇಕಾನಂದ, ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ರೂಪ್ಸ ಸಂಘಟನೆ ಅಧ್ಯಕ್ಷ ಲೋಕೇಶ್ ತಾಲಿಕಟ್ಟೆ ಸೇರಿ 78 ಅಭ್ಯರ್ಥಿಗಳು ತಮ್ಮ ಗೆಲುವಿಗೆ ಪೈಪೋಟಿಯಲ್ಲಿದ್ದಾರೆ.
ಈಶಾನ್ಯ ಪದವೀಧರ ಕ್ಷೇತ್ರದಲ್ಲಿ 19 ಅಭ್ಯರ್ಥಿಗಳು ಪೈಪೋಟಿಯಲ್ಲಿದ್ದು, ನೈರುತ್ಯ ಪದವಿ ಕ್ಷೇತ್ರದಲ್ಲಿ ಹತ್ತು ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಬೆಂಗಳೂರು ಪದವೀಧರ ಕ್ಷೇತ್ರದಲ್ಲಿ 15 ಅಭ್ಯರ್ಥಿಗಳು ಅಖಾಡದಲ್ಲಿದ್ದಾರೆ. ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ 15 ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದು, ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಎಂಟು ಅಭ್ಯರ್ಥಿಗಳ ನಡುವೆ ಜಿದ್ದಾಜಿದ್ದಿ ಪೈಪೋಟಿ ನಡೆಯಲಿದೆ.



