*2024 ರ ಯುಜಿಸಿ ನೆಟ್ ಪರೀಕ್ಷೆ ರದ್ದುಗೊಳಿಸುವಂತೆ ಕೇಂದ್ರ ಶಿಕ್ಷಣ ಸಚಿವಾಲಯ ಆದೇಶ*
ನವದೆಹಲಿ : 2024 ರ ಯುಜಿಸಿ ನೆಟ್ ಪರೀಕ್ಷೆಯನ್ನು ರದ್ದುಗೊಳಿಸುವಂತೆ ಕೇಂದ್ರ ಶಿಕ್ಷಣ ಸಚಿವಾಲಯ ಆದೇಶವನ್ನು ಹೊರಡಿಸಿದೆ. ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ನಡೆಸಿದ ಯುಜಿಸಿ ಪರೀಕ್ಷೆಯಲ್ಲಿ ಬಾರಿ ಅಕ್ರಮ ನಡೆದಿವೆ ಎಂದು ದೂರುಗಳು ಸ್ವೀಕರಿಸಿದ ಮರುದಿನವೇ ರದ್ದುಪಡಿಸುವಂತೆ ಸಚಿವರು ಆದೇಶ ಹೊರಡಿಸಿದ್ದಾರೆ.
ಈಗಾಗಲೇ ವೈದ್ಯಕೀಯ ಕೋರ್ಸ್ ನ ನೀಟ್ ಪರೀಕ್ಷೆ ವಿವಾದಗಳು ಸೃಷ್ಟಿಸಿದ ನಡುವೆ ಬೋಧಕರ ಆಯ್ಕೆಗೆ ನಡೆದ ರಾಷ್ಟ್ರೀಯ ಅರ್ಹತೆ ಪರೀಕ್ಷೆ ಯುಜಿಸಿ ನೆಟ್ ಗೆ ಈ ಬಾರಿ ಪೆನ್ ಪೇಪರ್ ಮಾದರಿಯಲ್ಲಿ ನಡೆಸಲಾಯಿತು. 11. 21 ಲಕ್ಷ ನೋಂದಾಯಿತ ಅಭ್ಯರ್ಥಿಗಳಲ್ಲಿ ಸುಮಾರು 81% ರಷ್ಟು ಪರೀಕ್ಷೆಗೆ ಹಾಜರಾಗಿದ್ದರು.
ಪರೀಕ್ಷೆ ಪ್ರಕ್ರಿಯೆ ಗುಣಮಟ್ಟ ಮತ್ತು ಪಾರದರ್ಶಕತೆ ಕಾಪಾಡಲು ಭಾರತ ಸರ್ಕಾರ ಶಿಕ್ಷಣ ಸಚಿವಾಲಯ ಯುಜಿಸಿ ನೆಟ್ ಜೂನ್ 2024ರ ಪರೀಕ್ಷೆಯನ್ನು ರದ್ದುಗೊಳಿಸಲು ನಿರ್ಧರಿಸಿದೆ ಎಂದು ಸಚಿವಾಲಯ ಹೇಳಿಕೆಯಲ್ಲಿ ನೀಡಿದೆ.
ಹೊಸ ಪರೀಕ್ಷೆಯನ್ನು ನಡೆಸಲಾಗುವುದು, ಮುಂದಿನ ದಿನಗಳಲ್ಲಿ ಇದಕ್ಕಾಗಿ ಪ್ರತ್ಯೇಕವಾಗಿ ಮಾಹಿತಿಯನ್ನು ಇಲಾಖೆ ವೆಬ್ ಸೈಟ್ ನಲ್ಲಿ ಹಂಚಿಕೊಳ್ಳಲಾಗುತ್ತದೆ. ಏಕಕಾಲದಲ್ಲಿ ಈ ವಿಷಯವನ್ನು ತನಿಕ ದಳ ಸಿಬಿಐಗೆ ಹಸ್ತಾಂತರಿಸಲಾಗುತ್ತಿದೆ ಎಂದು ಹೇಳಿದೆ. ಈ ಶಿಕ್ಷಣ ಸಚಿವಾಲಯದ ಆದೇಶವು ಲಕ್ಷಾಂತರ ಅಭ್ಯರ್ಥಿಗಳ ಮೇಲೆ ಪರಿಣಾಮ ಬೀರಲಿದೆ.
ಸಿದ್ದಾರ್ಥ
ವರ್ಲ್ಡ್ ಆಫ್ ಮೋಹನ್



