Thursday, May 14, 2026
Google search engine
HomeKarnatakaPetrol and Diesel price hike

Petrol and Diesel price hike

*ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ದಿಢೀರ್ ದರ ಏರಿಕೆ*

ಬೆಂಗಳೂರು: ಲೋಕಸಭಾ ಚುನಾವಣೆ ಮುಗಿದ ಹಿನ್ನೆಲೆಯಲ್ಲಿ ಖಜಾನೆ ತುಂಬಿಸಲು ಮುಂದಾಗಿರುವ ರಾಜ್ಯ ಸರ್ಕಾರ, ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಮಾರಾಟ ತೆರಿಗೆ ದರ ಹೆಚ್ಚಳ ಮಾಡಿದೆ. ಇದರಿಂದಾಗಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 3 ರೂ ಹಾಗೂ ಡೀಸೆಲ್ ದರ ಲೀಟರ್ ಗೆ 3.50 ರು ಹೆಚ್ಚಳವಾಗಿದೆ.

ಶನಿವಾರ ಈ ಕುರಿತು ಸರ್ಕಾರ ಆದೇಶ ಅಧಿಸೂಚನೆಯನ್ನು ಹೊರಡಿಸಿದೆ. ಈ ಆದೇಶ ತಕ್ಷಣದಿಂದಲೇ ಬರಲಿದೆ ಎಂದು ತಿಳಿಸಿದೆ. ಈ ನಿರ್ಧಾರದಿಂದ ಸರ್ಕಾರಕ್ಕೆ ವರ್ಷಕ್ಕೆ 2,800 ಕೋಟಿ ರೂ ಆದಾಯ ಸಿಗಲಿದೆ. ಇದರ ಪರಿಣಾಮವಾಗಿ ಸರಕು ಸಾಗಾಣಿಕೆ ವೆಚ್ಚ ಹೆಚ್ಚಾಗಿ ಮುಂದಿನ ದಿನಗಳಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಹೆಚ್ಚಾಗಿ ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಅನಾನುಕೂಲತೆ ಉಂಟಾಗುವ ಸಾಧ್ಯತೆ ಇದೆ.

ಮಾರಾಟ ತೆರಿಗೆ ದರ ಹೆಚ್ಚಳದಿಂದಾಗಿ ಇದೀಗ ಪೆಟ್ರೋಲ್ ದರ ಲೀಟರ್ ಗೆ 103 ರು ಹಾಗೂ ಡೀಸೆಲ್ 91.50 ರು. ಗೆ ಏರಿಕೆಯಾಗಲಿದೆ. ಈ ಹಿಂದೆ ಪೆಟ್ರೋಲ್ ಮೇಲಿನ ಚಿಲ್ಲರೆ ಮಾರಾಟ ತೆರಿಗೆ. ಶೇ 25.92 ಇತ್ತು. ಈಗ ಶೇ 3.9 ರಷ್ಟು ಹೆಚ್ಚಳ ಮಾಡಿರುವುದರಿಂದ ಶೇ 29.84ರು ಕ್ಕೆ ಏರಿಕೆಯಾಗಿದೆ. ಡೀಸೆಲ್ ಮೇಲಿನ ಚಿಲ್ಲರೆ ಮಾರಾಟ ತೆರಿಗೆ ಈ ಹಿಂದೆ ಶೇ14.34 ರಷ್ಟಿತ್ತು . ಈಗ ಶೇ 4.1 ರಷ್ಟು ಹೆಚ್ಚಿಸಿದ್ದು ಶೇ 18.44 ಕ್ಕೆ ಏರಿಕೆ ಆಗಿದೆ.

ಬೆಂಗಳೂರಿನಲ್ಲಿ ಶನಿವಾರ ಲೀಟರ್ ಪೆಟ್ರೋಲ್ ದರ 99.84 ರು ಇದ್ದು, ಡೀಸೆಲ್ ದರ ಲೀಟರ್ ಗೆ 85.93 ರು ಇತ್ತು. ಈಗ ಪೆಟ್ರೋಲ್ ದರ ಲೀಟರ್ ಗೆ 103ರು ಹಾಗೂ ಡೀಸೆಲ್ ದರ ಪ್ರತಿ ಲೀಟರ್ ಗೆ 91.50 ರು ಆಗಲಿದೆ. ಸಾಗಾಟ ವೆಚ್ಚಕ್ಕೆ ಅನುಗುಣವಾಗಿ ವಿವಿಧ ಜಿಲ್ಲೆಗಳಲ್ಲಿ ಮತ್ತು ಗ್ರಾಮೀಣ ಪ್ರದೇಶದಲ್ಲಿ ದರ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ.
ಈ ಹಿಂದೆ ಡೀಸೆಲ್ ಮತ್ತು ಪೆಟ್ರೋಲ್ ಮಾರಾಟ ತೆರಿಗೆ ದರವನ್ನು ಏರಿಸಬೇಕೆಂಬ ಪ್ರಸ್ತಾವನೆ ಸರ್ಕಾರದ ಮುಂದೆ ಇತ್ತು ಆದರೆ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ತಡೆಹಿಡಿಯಲಾಗಿತ್ತು.

ಸಿದ್ದಾರ್ಥ್
ವರ್ಲ್ಡ್ ಆಫ್ ಮೋಹನ್

LEAVE A REPLY

Please enter your comment!
Please enter your name here

RELATED ARTICLES
- Advertisment -
Google search engine

Most Popular

Recent Comments